ಧಾರಾಕಾರ ಮಳೆಯಿಂದಾಗಿ ತುಂಗಭದ್ರಾ ಜಲಾಶಯದ ನೀರಿನ ಮಟ್ಟ ಅಧಿಕಗೊಂಡಿದೆ. ಇದರಿಂದಾಗಿ ತುಂಗಾಭದ್ರಾ ಜಲಾಶಯದಿಂದ ಹೊರ ಹರಿವು ಪ್ರಮಾಣ ಹೆಚ್ಚಳ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಂಪ್ಲಿ ಪಟ್ಟಣದ ಕೋಟೆ ಪ್ರದೇಶಕ್ಕೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಕೋಟೆ ಪ್ರದೇಶದ ಕೆಲ ಮನೆಗಗೆ ನೀರು ನುಗ್ಗಿದೆ. ಜಲಾಶಯದಿಂದ 1.55 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ತುಂಗಾಭದ್ರಾ ಜಲಾಶಯದ ಒಳ ಹರಿವು ಕ್ಷಣ ಕ್ಷಣಕ್ಕೂ ಹೆಚ್ಚಳವಾಗ್ತಿದೆ. ತುಂಗಭದ್ರಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.