Select Your Language

Notifications

webdunia
webdunia
webdunia
webdunia

ಸರಕಾರದ ಕಾರ್ಯಕ್ರಮಗಳ ನಿಷೇಧ ವಿರುದ್ಧ ಮಾರಾಟಗಾರರ ಪ್ರತಿಭಟನೆ

flower sallers protest agenist govt dession
bangalore , ಬುಧವಾರ, 11 ಆಗಸ್ಟ್ 2021 (21:48 IST)
ಸರಕಾರದ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ ಹಣ್ಣಿನ ಬುಟ್ಟಿ ನಿಷೇಧ ಹಿಂತೆಗುಕೊಳ್ಳುವಂತೆ ಆಗ್ರಹಿಸಿ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪಬೆಳೆಗಾರರು, ಪುಷ್ಪ ಕೃಷಿ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘದ ಪ್ರತಿಭಟನೆ
 
ರಾಜ್ಯ ಸರಕಾರ ಮತ್ತು ಸರಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನೀಡದೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶ ರಾಜ್ಯದ ಪುಷ್ಪ ಬೆಳೆಗಾರರು ಹಾಗೂ ರೈತರ ಮೇಲೆ ಗಧಾಪ್ರಹಾರ ವಾಗಿದೆ. ಈ ಆದೇಶವನ್ನು ತಕ್ಷಣ ಹಿಂದಕ್ಕೆ ತಗೆದುಕೊಳ್ಳಬೇಕೆಂದು ಸರಕಾರವನ್ನು ಒತ್ತಾಯಿಸಲು ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷರಾದ ಟಿ.ಎಂ ಅರವಿಂದ್‌ ಹಾಗೂ ಸಂಘದ ನಿರ್ದೇಶಕರಾದ ಶ್ರೀಕಾಂತ್‌ ಬೊಲ್ಲಪಳ್ಳಿ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು, ಪುಷ್ಪ ಕೃಷಿ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘದ ನೇತೃತ್ವದಲ್ಲಿ ರಾಜ್ಯದ ಪುಷ್ಪ ಬೆಳೆಗಾರರು, ರೈತರು ಮತ್ತು ಮಾರಾಟಗಾರರ  ಬೃಹತ್‌ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆಯನ್ನು ನಡೆಸಲಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ 61 ತಾಲೂಕು ಪ್ರವಾಹ ಪೀಡಿತ ತಾಲೂಕು: ರಾಜ್ಯ ಸರಕಾರ ಘೋಷಣೆ