ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1231 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,81,816ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40083 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು 1124 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,15,473ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!