Select Your Language

Notifications

webdunia
webdunia
webdunia
Sunday, 13 April 2025
webdunia

ಆರೋಗ್ಯದಲ್ಲಿ ಏರುಪೇರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಆಸ್ಪತ್ರೆಗೆ ದಾಖಲು

Ex CM S M Krishna Health Condition

Sampriya

ಬೆಂಗಳೂರು , ಸೋಮವಾರ, 29 ಏಪ್ರಿಲ್ 2024 (20:18 IST)
Photo Courtesy Facebook
ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಸ್ಎಂ ಕೃಷ್ಣ ಅವರು ಕಳೆದ ಏಪ್ರಿಲ್ 22ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಡಿಸ್ಚಾರ್ಜ್ ಆದ ನಂತರ ಇದೀಗ ಮತ್ತೇ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದುಇಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಈ ಸಂಬಂಧ ಆಸ್ಪತ್ರೆ ಪ್ರಕಟನೆ ಹೊರಡಿಸಿ,  "ಸಣ್ಣ ಕಾಯಿಲೆಗೆ" ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ಹೇಳಿದ್ದಾರೆ.  

91 ವರ್ಷ ವರ್ಷದ ಎಸ್‌ ಎಂ ಕೃಷ್ಣ ಅವರಿಗೆ ಮಣಿಪಾಲದ ಡಾ. ಸತ್ಯನಾರಾಯಣ ಮೈಸೂರು ಮತ್ತು ವೈದ್ಯಕೀಯ ತಜ್ಞರ ತಂಡ ಚಿಕಿತ್ಸೆ ನೀಡುತ್ತಿದ್ದಾರೆ.

ಕೃಷ್ಣ ಅವರು ಅಕ್ಟೋಬರ್ 11, 1999 ರಿಂದ ಮೇ 28, 2004 ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅವರು 2009 ರಿಂದ 2012 ರವರೆಗೆ ಮನಮೋಹನ್ ಸಿಂಗ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ ಸರ್ಕಾರದ ಅವಧಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದಲ್ಲಿ ಬಿಜೆಪಿ ನಿಲುವು ಪ್ರಶ್ನಿಸಿದ ಡಿಕೆ ಶಿವಕುಮಾರ್