Webdunia - Bharat's app for daily news and videos

Install App

ಬಸ್‌ ಪ್ರಯಾಣ ದರ ಏರಿಕೆ ಬೆನ್ನಲ್ಲೇ ಹಾಲಿನ ದರವೂ ಹೆಚ್ಚಳ: ಸುಳಿವು ನೀಡಿದ ಸಚಿವ ವೆಂಕಟೇಶ್

Sampriya
ಶುಕ್ರವಾರ, 3 ಜನವರಿ 2025 (14:19 IST)
Photo Courtesy X
ಬೆಂಗಳೂರು: ಸಾರಿಗೆ ಟಿಕೆಟ್ ದರ ಏರಿಕೆ ಬಳಿಕ ರಾಜ್ಯ ಸರ್ಕಾರವು ಹಾಲಿನ ದರ ಏರಿಕೆಗೆ ಚಿಂತನೆ ನಡೆಸಿದೆ. ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರು ಈ ಬಗ್ಗೆ ಮುನ್ಸೂಚನೆ ನೀಡಿದ್ದಾರೆ.

ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರಿಂದ ಒತ್ತಾಯ ಇದೆ. ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ ಆಗಿದೆ. ಈ ಹಿನ್ನೆಲೆ ಹಾಲಿನ ದರ ಲೀಟರ್‌ಗೆ ₹ 10 ಏರಿಕೆ ಮಾಡಿ ಎಂದು ಹೈನುಗಾರರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. ಬೆಲೆ ಎಷ್ಟು ಹೆಚ್ಚಿಸಬೇಕೆಂದು ಇನ್ನೂ ತೀರ್ಮಾನ ಆಗಿಲ್ಲ ಎಂದು ತಿಳಿಸಿದರು.  

ಹಾಲಿನ ದರ ಏರಿಕೆ ಪ್ರಸ್ತಾಪ ಇರೋದು ಸತ್ಯ ಎಂದು ಸಚಿವರು ಒಪ್ಪಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ ನೀಡಿದರೆ ಶೀಘ್ರವೇ ಹಾಲಿನ ದರ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಬಸ್‌ ದರ ಏರಿಕೆಯಿಂದ ಕಂಗೆಟ್ಟ ಜನರಿಗೆ ಇದರಿಂದ ಮತ್ತೊಂದು ಬರೆ ಬೀಳಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments