Publish Date: Mon, 07 Aug 2023 (20:21 IST)
Updated Date: Mon, 07 Aug 2023 (20:28 IST)
ದಕ್ಷಿಣ ವಲಯ ವ್ಯಾಪ್ತಿಯ ವಿವಿಪುರಂ ವಾರ್ಡ್ ನಲ್ಲಿ ಬರುವ ಫುಡ್ ಸ್ಟ್ರೀಟ್ ನ ತಿಂಡಿ ಬೀದಿ ಕಾಮಗಾರಿ ನಡಿಯುತ್ತಿದೆ. ಸಜ್ಜನ್ ರಾವ್ ವೃತ್ತ ಮತ್ತು ಮಿನರ್ವ ವೃತ್ತದ ನಡುವೆ ಇರುವ ಸುಮಾರು 200 ಮೀಟರ್ ಉದ್ದದ ರಸ್ತೆಯ ಕಾಮಗಾರಿ ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ಪರಿಶೀಲಿಸಿದ್ರು.ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು.ಮೂಲಭೂತ ಸೌಕರ್ಯಗಳನ್ನು ಒಗದಿಸುವ ನಿಟ್ಟಿನಲ್ಲಿ ಹಾಗೂ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುತ್ತೆ.
ರಸ್ತೆಗೆ ಅನುಗುಣವಾಗಿ ಕಾಂಕ್ರಿಟ್ ಬೆಡ್ ಹಾಕಿ 5 ಮೀಟರ್ ಕಾಂಕ್ರೀಟ್ ರಸ್ತೆಯ ಕೆಲಸ ಮಾಡಲಾಗುತ್ತಿದೆ.ಜನರಿಗೆ ಆಕರ್ಷಣೆಯಾಗುವ ನಿಟ್ಟಿನಲ್ಲಿ ಕಂದು ಬಣ್ಣದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗ್ತತಿದೆ. ಎರಡೂ ಬದಿ 3 ಮೀಟರ್ ಪಾದಚಾರಿ ಮಾರ್ಗ, 25 ವಿದ್ಯುತ್ ದೀಪಗಳ ಅಳವಡಿಕೆ ಕೆಲಸ ಸೇರಿದಂತೆ ಕೆಲವು ಕೆಲಸಗಳು ಬಾಕಿ ಇವೆ.ಬಾಕಿ ಇರುವ ಕೆಲಸಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ವಲಯ ಆಯುಕ್ತ ಜಯರಾಮ್ ಅಧಿಕಾರಿಗಳಿಗೆ ಸೂಚನೆ ನೀಡಿದ್ರು.