Select Your Language

Notifications

webdunia
webdunia
webdunia
webdunia

ಕೇಂದ್ರಿಯ ವಿಹಾರ್ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಊಟದ ವ್ಯವಸ್ಥೆ

ಕೇಂದ್ರಿಯ ವಿಹಾರ್ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಊಟದ ವ್ಯವಸ್ಥೆ
ಬೆಂಗಳೂರು , ಸೋಮವಾರ, 22 ನವೆಂಬರ್ 2021 (18:25 IST)
ನಗರದಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಕೆಂಪೇಗೌಡ ವಾರ್ಡ್ ವ್ಯಾಪ್ತಿಯ ಯಲಹಂಕ ಕೆರೆ ತುಂಬಿ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತಗೊಂಡಿವೆ. ಸ್ಥಳಕ್ಕೆ ಸ್ಥಳೀಯ ಶಾಸಕ ಎಸ್.ಆರ್. ವಿಶ್ವನಾಥ್, ಮುಖ್ಯ ಆಯುಕ್ತ ಗೌರವ್ ಗುಪ್ತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ರಾತ್ರಿ ಎರಡು ಗಂಟೆ ಸಮಯದಲ್ಲಿ 130 ಮಿ.ಮೀಗೂ ಹೆಚ್ಚು ಮಳೆಯಾದ ಪರಿಣಾಮ ಯಲಹಂಕ ಕೆರೆ ತುಂಬಿ ಕೆರೆಯ ಕೋಡಿ ಬಿದ್ದು, ರಾಜಕಾಲುವೆಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ನ ಸುಮಾರು 4 ಅಡಿಯಷ್ಟು ನೀರು ನಿಂತು ಜಲಾವೃತಗೊಂಡಿದೆ. ಅಪಾರ್ಟ್ ಮೆಂಟ್ ನಲ್ಲಿ 604 ಪ್ಲಾಟ್ ಗಳಿದ್ದು, 1,600 ನಿವಾಸಿಗಳು ವಾಸಿಸುದ್ದಾರೆ. ಮೆನೆಯಲ್ಲಿರುವವರಿಗೆ ಹಾಲು, ಬಿಸ್ಕೆಟ್, ಕ್ಯಾಂಡಲ್, ಬ್ರೆಡ್, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. 18 ಎನ್.ಡಿ.ಆರ್.ಎಫ್ ತಂಡಗಳು ಹಾಗೂ ಅಗ್ನಿ ಶಾಮಕ ತಂಡಗಳು ದೋಣಿಗಳು ಹಾಗೂ ಟ್ರ್ಯಾಕ್ಟರ್ ಮೂಲಕ ನಿವಾಸಿಗಳನ್ನು ಮನೆಯಿಂದ ಹೊರಗೆ ಕರೆತರುವ ಹಾಗೂ ಒಳಗೆ ಕರೆದೊಯ್ಯುವ ಕೆಲಸ ಮಾಡುತ್ತಿದ್ದಾರೆ. ಯಾರಿಗೂ ಯಾವುದೇ ಸಮಸ್ಯೆ ಆಗುರಿವುದಿಲ್ಲ. ಪಾಲಿಕೆಯ ಕಂದಾಯ ಅಧಿಕಾರಿಗಳ ತಂಡವು ನಿವಾಸಿಗಳ ಮನೆಗೆ ತೆರಳಿ ಏನೇನು ಸಮಸ್ಯೆಯಾಗಿದೆ ಎಂಬ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನಕದಾಸ ಜಯಂತಿ ಆಚರಿಸಿದ ಸಿಎಂ ಬೊಮ್ಮಾಯಿ