Publish Date: Fri, 28 Nov 2025 (18:56 IST)
Updated Date: Fri, 28 Nov 2025 (18:58 IST)
ಬೆಂಗಳೂರು: ಸಿಎಂ ಕುರ್ಚಿಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಕಿತ್ತಾಟದ ನಡುವೆ ಈ ಬೆಳವಣಿಗೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ಬಂದಿದೆ. ಹೈಕಮಾಂಡ್ ಆದಷ್ಟು ಬೇಗ ಎಲ್ಲ ಗೊಂದಲಗಳಿಗೆ ತೆರೆ ಎಳೆಯುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಲಾಬಿಗಳು ಇಲ್ಲ. ಮಾಧ್ಯಮಗಳಲ್ಲಿ ಮಾತ್ರ ಅವೆಲ್ಲ ಇರುವುದು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ನಡೆಯುತ್ತಿರುವ ಬೆಳವಣಿಗೆಗೆ ಪರಿಹಾರವನ್ನು ಹುಡುಕಲಿದ್ದಾರೆ ಎಂದರು.
ಇನ್ನೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪರ ಸ್ವಾಮೀಜಿಗಳು ನೀಡುತ್ತಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು ನರೇಂದ್ರ ಮೋದಿ ಜೊತೆಗೆ ನಿಂತವರು, ಬಿಜೆಪಿಗೆ ಬೆಂಬಲ ನೀಡಿದವರು ಕಾಂಗ್ರೆಸ್ ಪಕ್ಷಕ್ಕೆ ಉಪದೇಶ ನೀಡುತ್ತಿರುವುದು ಸ್ವಾಗತಾರ್ಹ ಎಂದರು.