Select Your Language

Notifications

webdunia
webdunia
webdunia
webdunia

ನೆಲ, ಜಲ, ಭಾಷೆಯ ವಿಷಯದಲ್ಲಿ ಒಗ್ಗಟ್ಟು ಅಗತ್ಯ: ಸಚಿವ ಪಾಟೀಲ್

ನೆಲ, ಜಲ, ಭಾಷೆಯ ವಿಷಯದಲ್ಲಿ ಒಗ್ಗಟ್ಟು ಅಗತ್ಯ:  ಸಚಿವ ಪಾಟೀಲ್
ಬೆಂಗಳೂರು , ಶುಕ್ರವಾರ, 23 ಸೆಪ್ಟಂಬರ್ 2016 (14:23 IST)
ನೆಲ, ಜಲ ಹಾಗೂ ಭಾಷೆಯ ವಿಷಯ ಬಂದಾಗ ಒಗ್ಗಟ್ಟು ಪ್ರದರ್ಶಿಸಿದ್ದೇವೆ. ಮುಂದಿನ ದಿನಗಳಲ್ಲಿಯೂ ಸಹ ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ ಎಂದು ವಿಶೇಷ ವಿಧಾನ ಮಂಡಲ ಅಧಿವೇಶನದಲ್ಲಿ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅಭಿಪ್ರಾಯಪಟ್ಟರು.
 
ನಾಲ್ಕು ಜಲಾಶಯಗಳಲ್ಲಿ ಸಂಗ್ರಹಿಸಿರುವ ನೀರನ್ನು ಕೇವಲ ಕುಡಿಯಲು ಮಾತ್ರ ಸಂಗ್ರಹಿಸಲಾಗಿದ್ದು, ಈ ನೀರನ್ನು ಬೆಂಗಳೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಜನರಿಗೆ ನೀಡುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು
 
ಈ ನಾಲ್ಕು ಜಲಾಶಯಗಳಲ್ಲಿ ಸಂಗ್ರಹವಾಗುವ ನೀರನ್ನು ಕುಡಿಯುವುದಕ್ಕೆ ಬಿಟ್ಟು ಬೇರೆ ಉದ್ದೇಶಗಳಿಗೆ ಬಳಕೆ ಮಾಡಲು ಸಾಧ್ಯವಿಲ್ಲ. ಕುಡಿಯಲು ಮಾತ್ರ ಈ ನೀರನ್ನು ಬಳಕೆ ಮಾಡುವಂತೆ ವಿಶೇಷ ವಿಧಾನ ಮಂಡಲ ಅಧಿವೇಶನದಲ್ಲಿ ತಮ್ಮ ನಿರ್ಣಯವನ್ನು ಮಂಡಿಸಿದರು. 
 
ಈ ನಿರ್ಣಯವನ್ನು ಕಲಾಪ ಸರ್ವಾನುಮತದಿಂದ ಅಂಗೀಕರಿಸುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ನೆಲದಲ್ಲಿ ಇಂಗ್ಲೀಷ್‌ನಲ್ಲಿ ನಿರ್ಣಯ ಮಂಡಿಸಿದ ಜಗದೀಶ್ ಶೆಟ್ಟರ್