ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಗಳು ಮಾತ್ರವಲ್ಲ. ಎಲ್ಲಾ ಚುನಾವಣೆಗಳು ನನಗೆ ಪ್ರತಿಷ್ಠೆಯ ಚುನಾವಣೆಗಳಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದಗಂಗಾ ಶ್ರೀಗಳ 110ನೇ ಜನ್ಮದಿನದ ಅಂಗವಾಗಿ ಮಠಕ್ಕೆ ಆಗಮಿಸಿ ಶ್ರೀಗಳ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಮಾತ್ರ ಪ್ರತಿಷ್ಠೆಯ ಚುನಾವಣೆಯಲ್ಲ. ಪ್ರತಿಯೊಂದು ಚುನಾವಣೆ ನನ್ನ ಪಾಲಿಗೆ ಪ್ರತಿಷ್ಠೆಯದ್ದಾಗಿರುತ್ತದೆ ಎಂದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎರಡೂ ಕ್ಷೇತ್ರಗಳಲ್ಲಿ ಜಯಗಳಿಸುತ್ತದೆ. ಉಪಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ದಿಕ್ಸೂಚಿಯಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯವರು ತಿಪ್ಪರಲಾಗಾ ಹಾಕಿದರೂ ಉಪಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಹಿಂದೆ ಕೂಡಾ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿಯೂ ಕಾಂಗ್ರೆಸ್ ಪಕ್ಷವೇ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.