Select Your Language

Notifications

webdunia
webdunia
webdunia
webdunia

ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ ಗೆ ಹೋಗುವುದಿಲ್ಲ-ಅನರ್ಹ ಶಾಸಕ ಬಿ.ಸಿ.ಪಾಟೀಲ್ ಸ್ಪಷ್ಟನೆ

ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ ಗೆ ಹೋಗುವುದಿಲ್ಲ-ಅನರ್ಹ ಶಾಸಕ ಬಿ.ಸಿ.ಪಾಟೀಲ್ ಸ್ಪಷ್ಟನೆ
ಮೈಸೂರು , ಸೋಮವಾರ, 21 ಅಕ್ಟೋಬರ್ 2019 (11:04 IST)
ಮೈಸೂರು : ಮತ್ತೆ ನಾವು ಕಾಂಗ್ರೆಸ್ ಗೆ ಹೋಗಲ್ಲ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಸ್ಪಷ್ಟವಾಗಿ ಹೇಳಿದ್ದಾರೆ.




ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಸಿ ಪಾಟೀಲ್, ಬಿಜೆಪಿ ಅಭ್ಯರ್ಥಿಯಾಗುವ ವಿಚಾರವೂ ನಿರ್ಧಾರ ಆಗಿಲ್ಲ. ಅನರ್ಹ ಶಾಸಕರೆಲ್ಲರೂ ಚರ್ಚಿಸಿ ನಿರ್ಧಾರ ಕೈಗೊಳ್ತೇವೆ. ಆದರೆ ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.


ನಾಳೆ ಅನರ್ಹ ಶಾಸಕರ ಅರ್ಜಿ ವಿಚಾರಣೆ ಹಿನ್ನಲೆ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ. ಅನರ್ಹಗೊಳಿಸಿದ ಸ್ಪೀಕರ್ ಆದೇಶ ಸಂವಿಧಾನ ಬಾಹಿರ. ಬಹುತೇಕ ಅನರ್ಹ ಶಾಸಕರು ದೆಹಲಿಗೆ ಹೋಗಿದ್ದಾರೆ. ನನ್ನ ಕ್ಷೇತ್ರದಲ್ಲಿ ಮಳೆಯಿಂದ ಬಾರೀ ಹಾನಿಯಾಗುವ ಸಂಭವಿವಿದೆ. ಆದ್ದರಿಂದ ನಾನು ದೆಹಲಿಗೆ ಹೋಗಿಲ್ಲ ಎಂದು ಅವರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ; ಇಬ್ಬರು ಮಕ್ಕಳ ದುರ್ಮರಣ