Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷ ಉಳಿಯಲು ನಾಯಕತ್ವ ಬದಲಾವಣೆ ಅವಶ್ಯ: ಶ್ರೀನಿವಾಸ ಪ್ರಸಾದ್

ಕಾಂಗ್ರೆಸ್
ಬೆಂಗಳೂರು , ಗುರುವಾರ, 23 ಜೂನ್ 2016 (15:01 IST)
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಉಳಿಯಬೇಕಾದರೆ ನಾಯಕತ್ವ ಬದಲಾವಣೆ ಅವಶ್ಯಕ ಎಂದು ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
 
ಕಾಂಗ್ರೆಸ್ ಅತೃಪ್ತ ಶಾಸಕರೊಂದಿಗೆ ಚರ್ಚೆ ನಡಿಸಿ ಸುದ್ದಿಗಾರರೊಂದಿಗೆ ಮಾತನಾಡಿದ  ಮಾಜಿ ಸಚಿವ ಶ್ರೀನಿವಾಸ ಪ್ರಸಾದ್, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಉಳಿಯಲು ನಾಯಕತ್ವ ಬದಲಾವಣೆ ಅವಶ್ಯಕವಾಗಿದೆ. ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವಕ್ಕೆ ಯಾವುದೇ ಕೊರತೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪರ್ಯಾಯವಾಗಿ ಹಲವು ನಾಯಕರಿದ್ದಾರೆ ಎಂದು ನಾಯಕತ್ವ ಬದಲಾವಣೆ ವಿಚಾರ ಪ್ರಸ್ತಾಪ ಮಾಡಿದ್ದಾರೆ.
 
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್ ಹೈ-ಕಮಾಂಡ್‌ಗೆ ತಿಳಿಸುವೆ. ನಾನು ಹಾಗೂ ಮಾಜಿ ಸಚಿವ ಅಂಬರೀಶ್ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ನಾನು ರಾಜಕೀಯ ಸನ್ಯಾಸತ್ವ ಸ್ವೀಕರಿಸುವ ಪ್ರಶ್ನೆಯೇ ಇಲ್ಲ. ಕೇವಲ ಚುನಾವಣೆ ರಾಜಕಾರಣದಿಂದ ಹಿಂದೆ ಸರಿಯುತ್ತಿದ್ದೇನೆ. ನಾನು ಯಾವುದೇ ಪಕ್ಷಕ್ಕೂ ಪಲಾಯನ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲೇ ಸಕ್ರಿಯ ರಾಜಕಾರಣಿಯಾಗುತ್ತೇನೆ ಎಂದು ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಮ್ಯಾಚ್‌ಫಿಕ್ಸಿಂಗ್: ಮಾಲೀಕಯ್ಯ ಗುತ್ತೇದಾರ್