Select Your Language

Notifications

webdunia
webdunia
webdunia
webdunia

SSLC ರಿಸಲ್ಟ್ ವೀಕ್ಷಿಸಲು ಸುಲಭ ಮಾಹಿತಿ ಇಲ್ಲಿದೆ.

SSLC ರಿಸಲ್ಟ್ ವೀಕ್ಷಿಸಲು ಸುಲಭ ಮಾಹಿತಿ ಇಲ್ಲಿದೆ.
bangalore , ಶುಕ್ರವಾರ, 6 ಆಗಸ್ಟ್ 2021 (20:14 IST)
ಬೆಂಗಳೂರು :- ಕರ್ನಾಟಕ ರಾಜ್ಯ ಎಸ್​​ಎಸ್​ಎಲ್​ಸಿ ಫಲಿತಾಂಶವನ್ನು ನಾಳೆಯೇ ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ಎಸ್​ಎಸ್​ಎಲ್​ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ನಿನ್ನೆಯೇ ಫಲಿತಾಂಶ ಸಲ್ಲಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ಫಲಿತಾಂಶ ಪ್ರಕಟ ಮಾಡಲು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಪರೀಕ್ಷೆ ಮೌಲ್ಯಮಾಪನ ಮುಕ್ತಾಯಗೊಂಡಿರುವ ಕಾರಣ ತ್ವರಿತವಾಗಿ ಫಲಿತಾಂಶ ಪ್ರಕಟಿಸುವುದು ಉತ್ತಮ ಎಂದು ಚರ್ಚಿಸಿರುವ ಮಾಹಿತಿ ಲಭ್ಯವಾಗಿದೆ.ನಿನ್ನೆಯೇ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಫಲಿತಾಂಶ ಸಲ್ಲಿಸಲಾಗಿದ್ದು, ಪ್ರಕಟಿಸುವುದಷ್ಟೇ ಬಾಕಿ ಇದೆ.
ಜುಲೈ 19 ಹಾಗು 22 ರಂದು ಎರಡು ದಿನಗಳ ಕಾಲ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆದಿದ್ದು, 99.65% ವಿದ್ಯಾರ್ಥಿಗಳ ಹಾಜರಾತಿಯಾಗಿತ್ತು.ಕೊರೊನಾ ಆತಂಕದ ನಡುವೆಯೂ ರಾಜ್ಯದಲ್ಲಿ ಈ ವರ್ಷ 8,19,694 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ.
ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್​ಎಸ್​ಎಲ್​ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ.
ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ.ಸ್ಕ್ರೀನ್​ನಲ್ಲಿ ರಿಸಲ್ಟ್​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ.ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ.ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ.ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ : ಸಚಿವ ನಾರಾಯಣಗೌಡ