Select Your Language

Notifications

webdunia
webdunia
webdunia
Saturday, 5 April 2025
webdunia

ಸಿಎಂಗೆ ಕ್ಷುದ್ರ ವಿದ್ಯೆಗಳೆಲ್ಲ ಕರತಲಾಮಲಕ

cm sidaramayya
mysooru , ಮಂಗಳವಾರ, 24 ಅಕ್ಟೋಬರ್ 2023 (16:49 IST)
ಕುಣಿಯಲಾರದವರಿಗೆ ನೆಲ ಡೊಂಕು ಎಂದು ಲೇವಡಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ವಿಜಯದಶಮಿ ದಿನದಂದು ಬೆಳ್ಳಂಬೆಳಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ, ಕುಣಿಯಲು ಬಿಟ್ಟು ನೆಲ ಅಗೆಯುವ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಎಂದು ವ್ಯಂಗ್ಯವಾಡಿದ್ದಾರೆ. ದೋಖಾ ದುರುದ್ದೇಶವಾಗಿದ್ದಾಗ ನೆಲ ಡೊಂಕು ಮಾಡುವುದು ಕಷ್ಟವೇ? ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ ಹೇಳಿ ಎಂದು ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಎಂದು ಚಾಟಿ ಬೀಸಿದ್ದಾರೆ. ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ ಎಂದು ಟ್ವೀಟ್​ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಲ್ಯಾಣ ನಾಡಿನ ಅಭಿವೃದ್ಧಿ ಬಯಸಲಿ