ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಸಮಯಕ್ಕೆ ಸರಿಯಾಗಿ ಬೆಳಿಗ್ಗೆ 8ಕ್ಕೆ ಧ್ವಜಾರೋಹಣ ನೆರವೇರಿಸಲಾಯಿತು. ಕಂದಾಯ ಇಲಾಖೆಯಿಂದಲೇ ಸ್ವಾತಂತ್ರ್ಯ ದಿನಾಚರಣೆಯ ರೀತಿಯಲ್ಲಿ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಬೆಂಗಳೂರು ಉತ್ತರ ಅಸಿಸ್ಟೆಂಟ್ ಕಮೀಷನರ್ ಡಾ.ಶಿವಣ್ಣ ನೆರವೇರಿಸಿದರು. ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಉಪಸ್ಥಿತರಿದ್ದರು. 100ಕ್ಕೂ ಅಧಿಕ ಶಾಲ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬ್ಯಾಂಡ್ ಸೆಟ್, ಕಂಸಾಳೆ ಸೇರಿದಂತೆ ಹಲವು ವಿಶೇಷತೆಗಳು ನೋಡುಗರ ಕಣ್ಮನ ಸೆಳೆಯಿತು. ಸಂತ ತೆರೆಸ ಬಾಲಕಿಯರ ಶಾಲೆ, ಚಾಮರಾಜಪೇಟೆ ಬಾಲಕಿಯರ ಶಾಲೆ, ಸರ್ಕಾರಿ ಕನ್ನಡ, ಆಂಗ್ಲ ಪ್ರಾಥಮಿಕ ಶಾಲೆ ಸೇರಿದಂತೆ 5 ಶಾಲೆಗಳಿಂದ ಮಕ್ಕಳು ಭಾಗಿಯಾಗಿದ್ದರು.ಚಾಮರಾಜಪೇಟೆ ನಾಗರೀಕರಿಂದ ಜೈಕಾರ: ಸನಾತನ ಹಿಂದೂಧರ್ಮಕ್ಕೆ ಜೈ ಮತ್ತು ಭಾರತಮಾತೆಗೆ ಜೈಕಾರವನ್ನು ಕಾರ್ಯಕ್ರಮದ ವೇಳೆ ಚಾಮರಾಜಪೇಟೆ ನಾಗರೀಕರು ಕೂಗಿದರು