Publish Date: Sat, 15 Dec 2018 (14:43 IST)
Updated Date: Sat, 15 Dec 2018 (14:45 IST)
ಚಿಕ್ಕೋಡಿ ಜಿಲ್ಲೆ ರಚನೆಗೆ ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ.
ಚಿಕ್ಕೋಡಿ ಬಂದ್ ಬಹುತೇಕ ಯಶಸ್ವಿಯಾಗಿದೆ. ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ರಚನೆ ಮಾಡಬೇಕೆಂದು ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿತ್ತು.
ಹೋರಾಟದಲ್ಲಿ ಚಿಕ್ಕೋಡಿಯ ಸಂಪಾದನಾ ಚರಮೂರ್ತಿ ಮಠ ಮಹಾಸ್ವಾಮಿಗಳು ಭಾಗಿಯಾಗಿದ್ದರು. ಮೆರವಣಿಗೆ ಮುಖಾಂತರ ಪ್ರತಿಭಟನೆ ನಡೆಸಲಾಯಿತು. ಹೋರಾಟಗಾರರು, ಶಾಲಾ ವಿದ್ಯಾರ್ಥಿಗಳು, ಅಂಗಡಿ ಮಾಲಿಕರು, ಆಟೋ ಚಾಲಕರು, ಕನ್ನಡ ಪರ ಸಂಘಟನೆಗಳ ಸದಸ್ಯರು ಭಾಗಿ ಯಾಗಿದ್ದರು.
ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಬೇಡಿಕೆಗೆ ಸ್ಪಂದನೆ ಮಾಡುವಂತೆ ಹೋರಾಟನಿರತರು ಒತ್ತಾಯ ಮಾಡಿದರು.