Select Your Language

Notifications

webdunia
webdunia
webdunia
webdunia

ರಾಜ್ಯದ 1000 ಪೌರ ಕಾರ್ಮಿಕರಿಗೆ ವಿದೇಶ "ಪ್ರವಾಸ ಭಾಗ್ಯ"

ರಾಜ್ಯದ 1000 ಪೌರ ಕಾರ್ಮಿಕರಿಗೆ ವಿದೇಶ
ಬೆಂಗಳೂರು , ಶನಿವಾರ, 24 ಜೂನ್ 2017 (13:34 IST)
ಪೌರ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವ 1000 ಉದ್ಯೋಗಿಗಳನ್ನು ಸಿಂಗಾಪೂರ್ ಪ್ರವಾಸಕ್ಕಾಗಿ ಕಳುಹಿಸಲು ಸರಕಾರ ನಿರ್ಧರಿಸಿದೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಂತ್ರಗಳ ಬಳಕೆಯಿಂದ ನಗರವನ್ನು ಹೇಗೆ ಸ್ವಚ್ಚ ಮಾಡಬಹುದು ಎನ್ನುವ ಬಗ್ಗೆ ಅಧ್ಯಯನ ಪ್ರವಾಸಕ್ಕಾಗಿ ಪೌರ ಕಾರ್ಮಿಕರನ್ನು ಕಳುಹಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ತಿಳಿಸಿದ್ದಾರೆ.
 
ಸಿಂಗಾಪೂರ್‌ದಲ್ಲಿ ಅಳವಡಿಸಿಕೊಂಡಿರುವ ಸ್ವಚ್ಚತೆಯ ಬಗ್ಗೆ ತಿಳುವಳಿಕೆ ಪಡೆದುಕೊಳ್ಳಲು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 
 
10 ಕೋಟಿ ರೂಪಾಯಿ ವೆಚ್ಚದಲ್ಲಿ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕಾಗಿ ಕಳುಹಿಸಲಾಗುತ್ತಿದೆ. ಮ್ಯಾನ್‌ಹೋಲ್ ಸ್ವಚ್ಚತೆ ಸೇರಿದಂತೆ ಇತರ ಸ್ವಚ್ಚತಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದ ಎಚ್ ವಿಶ್ವನಾಥ್