Webdunia - Bharat's app for daily news and videos

Install App

ಕಾಡಾನೆ ದಾಳಿ- ಅಪಾಯದಿಂದ ಪಾರಾದ ವ್ಯಕ್ತಿ

Webdunia
ಶುಕ್ರವಾರ, 1 ಜುಲೈ 2022 (20:41 IST)
ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ  ಕಾಡಾನೆ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಆ ವ್ಯಕ್ತಿ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ.  ಮೂಡಿಗೆರೆಯ MISLನಲ್ಲಿ ಕೆಲಸ ಮಾಡುತ್ತಿದ್ದ ಸತ್ತಿಗನಹಳ್ಳಿ ಗ್ರಾಮದ ಪ್ರಭಾಕರ್ ರಾತ್ರಿ ಕೆಲಸ ಮುಗಿಸಿ 9 ಗಂಟೆಗೆ ಬೈಕಿನಲ್ಲಿ ಹಿಂದಿರುಗುವಾಗ ಕಾಡಾನೆ ದಾಳಿ ಮಾಡಿದೆ. ಪ್ರಭಾಕರ್ ಕೂಡಲೇ ಬೈಕನ್ನ ಅಲ್ಲೇ ಬಿಟ್ಟು ಓಡಿ ಹೋಗಿ ಸಾವಿನಿಂದ ಪಾರಾಗಿದ್ದಾರೆ. ಆನೆ ದಾಳಿಯಿಂದ ಬೈಕ್ ಸಂಪೂರ್ಣ ಜಖಂಗೊಂಡಿದೆ. ಆನೆ ದಾಳಿಯಿಂದ ಪ್ರಭಾಕರ್ ಕಾಲು, ತಲೆಗೆ ತೀವ್ರ ಪೆಟ್ಟಾಗಿದ್ದು ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪ್ರಭಾಕರ್ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಅರಣ್ಯ ಅಧಿಕಾರಿಗಳು ಆನೆ ದಾಳಿ ಮಾಡಿದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಅರಣ್ಯ ಇಲಾಖೆ ಕೂಡಲೇ ಆನೆಯನ್ನ ಸೆರೆ ಹಿಡಿದು ಸ್ಥಳಾಂತರಿಸಬೇಕೆಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments