Publish Date: Sat, 01 Apr 2023 (16:30 IST)
Updated Date: Sat, 01 Apr 2023 (14:17 IST)
ತುಮಕೂರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿ, ದರ್ಪ ತೋರಿದ್ದಾರೆ. ಬಗರ್ ಹುಕುಂ ಜಮೀನು ರೈತರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದರ್ಪ ತೋರಿದ್ದು, ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಗಂಗಯ್ಯನಪಾಳ್ಯದಲ್ಲಿ ಈ ಘಟನೆ ನಡೆದಿದೆ. ಟ್ರಂಚ್ ಹೊಡೆಯೋದನ್ನ ತಡೆದ ರೈತರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಲಾಠಿ ಪ್ರಹಾರ ನಡೆಸಿ, ವಿಕೃತಿ ಮೆರೆದಿದ್ದಾರೆ. ಲಾಠಿಚಾರ್ಜ್ನಲ್ಲಿ ರೈತರ ತಲೆಗೆ ಪೆಟ್ಟಾಗಿದ್ದು, ಮಹಿಳೆಯರಿಗೂ ಗಾಯಗಳಾಗಿವೆ. ಗುಬ್ಬಿ ತಾಲೂಕು ಆಸ್ಪತ್ರೆಯಲ್ಲಿ ರೈತರಿಗೆ ಚಿಕಿತ್ಸೆ ನೀಡಲಾಗ್ತಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ