Select Your Language

Notifications

webdunia
webdunia
webdunia
Friday, 18 April 2025
webdunia

ದೊಡ್ಡಬಳ್ಳಾಪುರ: 6ನೇ ಮಹಡಿಯಿಂದ ಹಾರಿ ವಿದೇಶೀ ವಿದ್ಯಾರ್ಥಿನಿ ಆತ್ಮಹತ್ಯೆ

student doddaballapura bengaluru ಬೆಂಗಳೂರು ದೊಡ್ಡಬಳ್ಳಾಪುರ ವಿದ್ಯಾರ್ಥಿನಿ
bengaluru , ಗುರುವಾರ, 28 ಏಪ್ರಿಲ್ 2022 (14:24 IST)
ವಿದೇಶೀ ವಿದ್ಯಾರ್ಥಿಯೊಬ್ಬಳು ಹಾಸ್ಟೇಲ್‌ ನ ೬ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರದಲ್ಲಿರುವ ಗೀತಂ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ಉಗಾಂಡ ಮೂಲದ ಆಸೀನ ಆಗಷ್ (26) ಎಂಬ ವಿದ್ಯಾರ್ಥಿನಿ ಬುಧವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿದ್ಯಾರ್ಥಿನಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ವಿರುದ್ದ ಉದ್ವಿಗ್ನಗೊಂಡ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಾಲೇಜಿನ ಕಚೇರಿ, ಕ್ಯಾಂಟೀನ್ ಕಿಟಕಿ ಗಾಜುಗಳನ್ನು ಒಡೆದು ಹಾಕಿ ಆಕ್ರೋಶವನ್ನು ಹೊರಹಾಕಿದ್ದಾರೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ಹತ್ತೋಟಿಗೆ ತರಲು ಯಶಸ್ವಿಯಾಗಿದ್ದಾರೆ. ಈ ಕುರಿತು ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಿದ್ಯಾರ್ಥಿನಿ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ತನಿಖೆಯ ನಂತರ ಎಲ್ಲವು ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.
ಮೂರು ದಿನಗಳ ಹಿಂದಷ್ಟೇ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಗಳು ಕರ್ನಾಟಕ ಮೂಲದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು ಈ ಕುರಿತು ವಿದ್ಯಾರ್ಥಿಗಳ ಪೋಷಕರು ದೂರು ದಾಖಲಿಸಿದ ನಂತರ ಧ್ರ ಮೂಲದ ವಿದ್ಯಾರ್ಥಿಗಳ ವಿರುದ್ದ ಪ್ರಕರಣವನ್ನು ದಾಖಲಿಸಿ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆಸಿಡ್‌ ಎರಚಿದ ಕಿರಾತಕ!