Publish Date: Wed, 21 Dec 2022 (06:21 IST)
Updated Date: Wed, 21 Dec 2022 (01:24 IST)
ಬೆಳಗಾವಿ : ರಾಜ್ಯದ ಗಡಿ ವಿಚಾರದಲ್ಲಿ ನಾಡಿನ ಹಿತಕಾಪಾಡುವ ನಿಲುವು ಅಚಲವಾಗಿದೆ. ಈ ನಿಲುವಿನಿಂದ ಒಂದಿಂಚೂ ಕೂಡ ಹಿಂದೆ ಸರಿಯುವುದಿಲ್ಲ.
ಈ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸಭೆಯಲ್ಲಿಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಮಂಡಿಸಿದ ನಿಲುವಳಿ ಸೂಚನೆಗೆ ಪ್ರತಿಕ್ರಿಯಿಸಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಾತನಾಡಿದರು. ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವ್ಯಾಜ್ಯ ಪ್ರಕರಣ ಸರ್ವೋಚ್ಛ ನ್ಯಾಯಾಲಯದಲ್ಲಿದೆ.
ಗಡಿ ವ್ಯಾಜ್ಯಗಳು ಸಂವಿಧಾನಬದ್ಧವಾಗಿ ಸಂಸತ್ತಿನಲ್ಲಿಯೇ ಪರಿಹಾರವಾಗಬೇಕಾಗಿರುವದರಿಂದ, ನ್ಯಾಯಾಲಯದಲ್ಲಿ ಮಹಾರಾಷ್ಟ್ರ ಸರ್ಕಾರ ದಾಖಲಿಸಿರುವ ಪ್ರಕರಣ ನಿರ್ವಹಣೆಯಾಗಬೇಕೆ ಎಂಬುದರ ಬಗ್ಗೆಯೇ ಈಗ ವಿಚಾರಣೆ ನಡೆಯುತ್ತಿದೆ.
ಪ್ರಕರಣದ ನಿರ್ವಹಣೆ ಸಮರ್ಥನೀಯವಲ್ಲ. ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಗೆ ಬಂದ ಕೂಡಲೇ ಮಹಾರಾಷ್ಟ್ರ ಮುಖ್ಯಮಂತ್ರಿಗಳು ನೀಡಿದ ಪ್ರತಿಕ್ರಿಯೆಗೆ ತಾವು ಕೂಡ ತೀಕ್ಷ್ಣ ಉತ್ತರ ನೀಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.