Select Your Language

Notifications

webdunia
webdunia
webdunia
webdunia

ಬಿಜೆಪಿ ಮಾಜಿ ಸಚಿವ ಎ.ಮಂಜು ಜೆಡಿಎಸ್ ಸೇರ್ಪಡೆ

ಬಿಜೆಪಿ ಮಾಜಿ ಸಚಿವ ಎ.ಮಂಜು ಜೆಡಿಎಸ್ ಸೇರ್ಪಡೆ
ಹಾಸನ , ಭಾನುವಾರ, 12 ಮಾರ್ಚ್ 2023 (12:17 IST)
ಹಾಸನ : ಬಿಜೆಪಿ ಮಾಜಿ ಸಚಿವ ಎ.ಮಂಜು ಶನಿವಾರ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ರಾಮನಗರದಲ್ಲಿರುವ ಹೆಚ್ಡಿಕೆ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಿದ್ದಾರೆ.

ಬಳಿಕ ಬಿಡದಿಯ ತೋಟದ ಮನೆಯಲ್ಲಿ ಆಯೋಜಿಸಿದ್ದ ಪೂರ್ಣಾಹುತಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ವಿಧಾನ ಪರಿಷತ್ ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಎ.ಮಂಜು, ನಡುವೆ ಕಾಂಗ್ರೆಸ್ನಿಂದ ಟಿಕೆಟ್ಗೆ ಪ್ರಯತ್ನಿಸಿದ್ದರು. ಇದೀಗ ಜೆಡಿಎಸ್ ಪಕ್ಷದಿಂದ ಟಿಕೆಟ್ ಭರವಸೆ ನೀಡಿದ ಬಳಿಕ ಪಕ್ಷ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕಂಠಪೂರ್ತಿ ಕುಡಿದು ಮಂಟಪದಲ್ಲೇ ಮಲಗಿಬಿಟ್ಟ ವರ?