Select Your Language

Notifications

webdunia
webdunia
webdunia
webdunia

ಬಿಜೆಪಿಯ ಮಾಜಿ ಶಾಸಕರು ಕಾಂಗ್ರೆಸ್​ ಸೇರ್ಪಡೆ,

Former BJP MLA joins Congress
bangalore , ಸೋಮವಾರ, 20 ಫೆಬ್ರವರಿ 2023 (16:58 IST)
ಚುನಾವಣೆ ಹತ್ತಿರ ಬರುತ್ತಿದ್ದಂತೆ ಪರ ವಿರೋಧ ಚರ್ಚೆಗಳು ಹೆಚ್ಚಾಗುತ್ತಿದೆ. ಇದರ ಜೊತೆಗೆ ಪಕ್ಷೇತರ ಪರ್ವ ಕೂಡ ಪ್ರಾರಂಭವಾಗಿದೆ. ಒಂದು ಪಕ್ಷ ಬಿಟ್ಟು ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬೆಂಗಳೂರಿನ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಕೆ.ಎಸ್ ಕಿರಣ್ ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹೆಚ್. ನಿಂಗಪ್ಪ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸುರ್ಜೀವಾಲಾ ನೇತೃತ್ವದಲ್ಲಿ ಪಕ್ಷದ ಧ್ವಜ ಕೊಟ್ಟು ಸ್ವಾಗತಿಸಿದರು. ಇದಾದ ಬಳಿಕ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಇನ್ನಷ್ಟು ಹಾಲಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಜಿ.ಪರಮೇಶ್ವರ್,ಕೆ‌.ಹೆಚ್.ಮುನಿಯಪ್ಪ, ಸಲೀಂ ಅಹ್ಮದ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು

Share this Story:

Follow Webdunia kannada

ಮುಂದಿನ ಸುದ್ದಿ

ಮುಂಡ್ಕೂರು ಜಾತ್ರೆಯಲ್ಲಿ ಪಟಾಕಿ ಸಿಡಿದು ಅವಘಡ