Publish Date: Fri, 01 Mar 2019 (14:50 IST)
Updated Date: Fri, 01 Mar 2019 (14:53 IST)
ಬೆಂಗಳೂರು : ಮಾಜಿ ಬಿಜೆಪಿ ಶಾಸಕ ತಿಪ್ಪೇಸ್ವಾಮಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಶ್ರೀರಾಮುಲು ವಿರುದ್ಧ ಸ್ಪರ್ಧಿಸಿದ್ದ ತಿಪ್ಪೇಸ್ವಾಮಿ ಪರಭಾವಗೊಂಡಿದ್ದರು.
ತಮಗೆ ಸೀಟು ಸಿಗದೇ ಇರುವುದಕ್ಕೆ ಶ್ರೀರಾಮುಲು ಅವರೇ ಕಾರಣ ಎಂದು ಬೇಸರಗೊಂಡಿದ್ದ ತಿಪ್ಪೇಸ್ವಾಮಿ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಂಸದ ಚಂದ್ರಪ್ಪ, ಮಾಜಿ ಸಚಿವ ಆಂಜನೇಯ, ಶಾಸಕ ರಘುಮೂರ್ತಿ, ಮಾಜಿ ಶಾಸಕ ಡಿ.ಸುಧಾಕರ್ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.