Publish Date: Sat, 02 Mar 2019 (11:46 IST)
Updated Date: Sat, 02 Mar 2019 (11:52 IST)
ತುಮಕೂರು : ಬಿಜೆಪಿ ಮುಖಂಡನೊರ್ವನನ್ನು ದೂರೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆತಂದಿದ್ದಕ್ಕೆ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡರು ಪೊಲೀಸ್ ಠಾಣೆಯ ಮುಂದೆ ಮಲಗಿ ಪ್ರತಿಭಟನೆ ಮಾಡಿದ್ದಾರೆ.
ತಾಲೂಕು ಪಂಚಾಯ್ತಿಯ ಬಿಜೆಪಿ ಮಾಜಿ ಸದಸ್ಯ ಹನುಮಂತರಾಜು ವಿರುದ್ಧ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಶಿವು ಎಂಬವರ ನಡುವೆ ಪೈಪ್ ಲೈನ್ ವಿಚಾರದಲ್ಲಿ ಗಲಾಟೆ ನಡೆದಿತ್ತು. ಆದ್ದರಿಂದ ಶಿವು ಅವರು ಹನುಮಂತರಾಜು ಅವರ ಮೇಲೆ ಕ್ಯಾತಸಂದ್ರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹೀಗಾಗಿ ಹನುಮಂತರಾಜು ಅವರನ್ನು ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದರು.
ಈ ಹಿನ್ನಲೆಯಲ್ಲಿ ಆಕ್ರೊಶಗೊಂಡ ಬಿ.ಸುರೇಶ್ ಗೌಡರು ಕ್ಯಾತಸಂದ್ರದ ಪೊಲೀಸ್ ಠಾಣೆಯ ದ್ವಾರದ ಮೆಟ್ಟಿಲಿನಲ್ಲಿ ಮಲಗಿದಲ್ಲದೆ ಪಿಎಸ್‍ಐ ರಾಜು ಅವರನ್ನು ಒಳಗೆ ಬಿಡದೆ ಕೆಲಕಾಲ ಹೊರಗಡೆಯೇ ನಿಲ್ಲುವಂತೆ ಮಾಡಿ ಪೊಲೀಸರಿಗೆ ತೊಂದರೆಯನ್ನು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.