Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಬೊಮ್ಮಾಯಿ ಆಸ್ಪತ್ರೆಗೆ ದಾಖಲು
bangalore , ಮಂಗಳವಾರ, 17 ಅಕ್ಟೋಬರ್ 2023 (16:00 IST)
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾರೋಗ್ಯದ ಖಾರಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸಿಎಂ ಆಗಿದ್ದ ಸಂದರ್ಭದಲ್ಲಿ ಕೂಡ ಬಸವರಾಜ ಬೊಮ್ಮಾಯಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಆಯುರ್ವೇದ, ನಾಟಿ ಔಷಧಿಗಳನ್ನು ಪಡೆಯುತ್ತಿದ್ದರೂ ಮೊಣಕಾಲು ನೋವು ಕಡಿಮೆಯಾಗದ ಕಾರಣ, ವೈದ್ಯರ ಸಲಹೆ ಮೇರೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಎಂದು ಟ್ವೀಟ್ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಸಿಎಂ ಡಿಕೆಶಿವಕುಮಾರ್ ಗೆ ಅಶ್ವಥ್ ನಾರಾಯಣ್ ತಿರುಗೇಟು