ಶಕ್ತಿ ಯೋಜನೆಯಿಂದ ಮೊದಲ ತಿಂಗಳೇ ನೌಕರರಿಗೆ ಸರ್ಕಾರ ಬರೆ ಹಾಕಿದೆ ಎಂದು ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ.
ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿಕಾರಿದ್ದು,ಶಕ್ತಿ ಯೋಜನೆ ಫಲ ಶೃತಿ ಸಾರಿಗೆ ನೌಕರರಿಗೆ ಅರ್ಧ ಸಂಬಳ ಕಟ್ ಆಗಿದೆ.ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ.ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ.ಬರುವಂತ ದಿನಗಳಲ್ಲಿ ಸಾರಿಗೆ ನಿಗಮಗಳು ಬಸ್ ಗಳನ್ನು ಡೀಸೆಲ್ ಇಲ್ಲದೆ ನಿಲ್ಲಿಸುವಂತದ್ದು,ಸಾರಿಗೆ ನೌಕರರು ಸಂಬಳ ಇಲ್ಲದೆ ದುಡಿಯುವಂತದ್ದು, ಕೆಟ್ಟ ಬಸ್ ಗಳು ರಸ್ತೆಯಲ್ಲಿ ನಿಲ್ಲುವ ದಿನಗಳು ದೂರವಿಲ್ಲ ಎಂದು ಮಾಜಿ ಸಿಎಂ ಬೊಮ್ಮಯಿ ಕಿಡಿಕಾರಿದ್ದಾರೆ.