Publish Date: Sat, 15 Jul 2023 (11:13 IST)
Updated Date: Sat, 15 Jul 2023 (11:16 IST)
ಬೆಂಗಳೂರು : ಸಂಘಪರಿವಾರದ ಸಂಸ್ಥೆಗೆ ಬಿಜೆಪಿ ಅವಧಿಯಲ್ಲಿ ಮಂಜೂರು ಮಾಡಿದ್ದ ಭೂಮಿ ವಾಪಸ್ ಪಡೆಯಲು ಕಾಂಗ್ರೆಸ್ ಸರ್ಕಾರ ಕ್ರಮ ತೆಗೆದುಕೊಂಡಿದೆ.
ಜನಸೇವಾ ಟ್ರಸ್ಟ್ಗೆ ಬೆಂಗಳೂರಿನ ತಾವರೆಕೆರೆ ಹೋಬಳಿಯಲ್ಲಿ ಬಿಜೆಪಿ ಸರ್ಕಾರ 35 ಎಕರೆ 33 ಗುಂಟೆ ಗೋಮಾಳ ಜಮೀನು ನೀಡಿತ್ತು. ಗೋಮಾಳವು ಜಾನುವಾರುಗಳ ಮೇವಿಗಾಗಿ ಮೀಸಲಿರಿಸಿದ ಸರ್ಕಾರಿ ಭೂಮಿಯಾಗಿದೆ. ಈ ಕಾರಣಕ್ಕೆ ಆ ಭೂಮಿಯನ್ನು ವಾಪಸ್ ಪಡೆದಿದ್ದೇವೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ಸರ್ಕಾರದ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಜನಸೇವಾ ಟ್ರಸ್ಟ್ ತನ್ನದೇ ಆದ ರೀತಿಯಲ್ಲಿ ಸೇವೆ ಮಾಡುತ್ತಿದೆ. ಈ ಬಗ್ಗೆ ನಮ್ಮ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಮುಂದಿನ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿರದಿದ್ದರೆ ನ್ಯಾಯಾಂಗ ಆಯೋಗ ರಚನೆ ಆಗಿದ್ದು ಯಾಕೆ? ಭ್ರಷ್ಟಾಚಾರ ಮುಚ್ಚಿ ಹಾಕಲು ಎಸಿಬಿ ಸೃಷ್ಟಿ ಮಾಡಿದ್ದರು. ಇದು ಇಡಿ ಜಗತ್ತಿಗೆ ತಿಳಿದಿದೆ ಎಂದು ಕಿಡಿಕಾರಿದರು.