Publish Date: Mon, 21 Oct 2019 (10:07 IST)
Updated Date: Mon, 21 Oct 2019 (10:08 IST)
ಬೆಂಗಳೂರು : ದೆಹಲಿಯ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಲಿದ್ದಾರೆ.
ಅಕ್ರಮ ಹಣ ಪತ್ತೆ ಪ್ರಕರಣದಡಿ ಇಡಿ ಬಂಧನಕ್ಕೆ ಒಳಗಾಗಿ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲು ಸೇರಿದ್ದಾರೆ. ಈ ಹಿನ್ನಲೆಯಲ್ಲಿ ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ತಮ್ಮ ಬೆಂಬಲಕ್ಕೆ ನಿಂತು ತಮಗೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡಿದ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಇಂದು ಹೆಚ್.ಡಿ.ಕುಮಾರಸ್ವಾಮಿ ತಿಹಾರ್ ಜೈಲಿಗೆ ತೆರಳಿದ್ದಾರೆ.
ಇವರಿಗೆ ಮಾಜಿ ಸಚಿವರಾದ ಸಾರಾ ಮಹೇಶ್ ಹಾಗೂ ಸಿಎಸ್ ಪುಟ್ಟರಾಜು ಸಾಥ್ ನೀಡಲಿದ್ದಾರೆ ಎನ್ನಲಾಗಿದೆ. ಹಾಗೇ ಡಿಕೆ ಶಿವಕುಮಾರ್ ಅವರನ್ನು ಇಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.