Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಎಸ್.ಎಂ. ಕೃಷ್ಣ ಸಹೋದರ ಎಸ್.ಎಂ. ಶಂಕರ್‌ ನಿಧನ

ಮಾಜಿ ಸಿಎಂ ಎಸ್.ಎಂ. ಕೃಷ್ಣ ಸಹೋದರ ಎಸ್.ಎಂ. ಶಂಕರ್‌ ನಿಧನ
ಬೆಂಗಳೂರು , ಶನಿವಾರ, 22 ಜೂನ್ 2019 (11:15 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರ ವಿಧಾನ ಪರಿಷತ್‌ ಸದಸ್ಯ ಎಸ್.ಎಂ. ಶಂಕರ್‌ ಇಂದು ನಿಧನರಾಗಿದ್ದಾರೆ.




ಇವರಿಗೆ 83 ವರ್ಷ ವಯಸ್ಸಾಗಿದ್ದು, ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.  ಈ ಹಿನ್ನಲೆಯಲ್ಲಿ ಇವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.


ಎಸ್.ಎಂ.ಶಂಕರ್ ಅವರು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದರು. ಅವರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಅವರ ಸ್ವಗ್ರಾಮ ಸೋಮನಹಳ್ಳಿಯಲ್ಲಿ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಗ್ರಾಮವಾಸ್ತವ್ಯವನ್ನು ಟೀಕಿಸಿದ ಬಿಜೆಪಿಗೆ ತಕ್ಕ ಉತ್ತರ ನೀಡಿದ ಸಾ.ರಾ.ಮಹೇಶ್