Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

Chief Minister Siddaramaiah, former Chief Minister D.V. Sadananda Gowda, Congress Govt

Sampriya

ಬೆಂಗಳೂರು , ಬುಧವಾರ, 26 ನವೆಂಬರ್ 2025 (12:47 IST)
ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ಕಾಂಗ್ರೆಸ್‌ ನಾಯಕರ ಸ್ವಯಂಕೃತ ಅಪರಾಧದಿಂದ ರಾಜ್ಯದಲ್ಲಿ ಸರ್ಕಾರ ಬಿದ್ದು ಹೋದರೆ ಬಿಜೆಪಿ ವರಿಷ್ಠರು ನೀಡುವ ಆದೇಶ ಜಾರಿಗೊಳಿಸುತ್ತೇವೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆಗಬಾರದು, ಏನಾದರೂ ಮಾಡಿ ಎಂದು ಪಕ್ಷದ ವರಿಷ್ಠರು ಸೂಚನೆ ನೀಡಿದರೆ ನಾವು ಸರ್ಕಾರ ರಚನೆಗೆ ಪ್ರಯತ್ನಿಸುತ್ತೇವೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ.  ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ರೈತರ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಆದ್ದರಿಂದ ಈ ಸರ್ಕಾರ ಇರಬಾರದು ಎಂದು ಹೇಳಿದರು.

ದೇಶದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು. ದೇಶದಲ್ಲಿ ಕೇವಲ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆ. ಇದರಲ್ಲಿ ಎರಡು ಸಣ್ಣ ಪುಟ್ಟ ರಾಜ್ಯಗಳಿವೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ