Publish Date: Fri, 15 Mar 2019 (14:32 IST)
Updated Date: Fri, 15 Mar 2019 (14:37 IST)
ಮೈಸೂರು : ರಸ್ತೆ ಅಭಿವೃದ್ಧಿ ವಿಚಾರಕ್ಕೆ ಸಂಬಮಧಿಸಿದಂತೆ ನಾವು ಮಾಡಿದ ಕೆಲಸವನ್ನು ನಾನು ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಂಸದ ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು,’ ನಾನು, ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಬೆಂಗಳೂರು-ಮೈಸೂರು ರಸ್ತೆ ಅಭಿವೃದ್ಧಿಪಡಿಸುವಾಗ ಸಂಸದ ಪ್ರತಾಪ್ ಸಿಂಹ ಎಲ್ಲಿದ್ದ? ಮೈಸೂರಿಗೆ ಅವನ ಕೊಡುಗೆ ಏನು? ನಾವು ಮಾಡಿದ ಕೆಲಸವನ್ನು ನಾನು ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾನೆ. ನಾನು ಪ್ರತಾಪ್ ಸಿಂಹ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಪ್ರತಾಪ್ ಸಿಂಹ ಅಷ್ಟೇ ಅಲ್ಲ ಬಿಜೆಪಿಯ ರಾಜ್ಯ ಸಂಸದರು ಯಾವುದೇ ಕೆಲಸವನ್ನು ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
ಚಾಮರಾಜನಗರ ಕ್ಷೇತ್ರದ ಹಾಲಿ ಸಂಸದ ಧ್ರುವನಾರಾಯಣ ಅವರ ಜೊತೆಗೆ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಬಿಜೆಪಿಯವರು ಬರುತ್ತಾರಾ? ಸಂಸದೆ ಶೋಭಾ ಕರಂದ್ಲಾಜೆ ಬರುತ್ತಾರಾ? ಇಲ್ಲವೇ ಸಂಸದರಾದ ನಳಿನ್ ಕುಮಾರ್ ಹಾಗೂ ಅನಂತಕುಮಾರ್ ಹೆಗ್ಡೆ ಚರ್ಚೆಗೆ ಬರುತ್ತಾರಾ? ಬಿಜೆಪಿ ಸಂಸದರು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಮಾಡದೇ ಸುಮ್ಮನೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ .
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.