ಬದಾಮಿ ಪ್ರವಾಸದಲ್ಲಿ ಮೌನಕ್ಕೆ ಜಾರಿದ ಮಾಜಿ ಸಿಎಂ

Webdunia
ಬುಧವಾರ, 18 ಜುಲೈ 2018 (15:49 IST)
ಇಂದಿನಿಂದ ಎರಡು ದಿನಗಳ ಬದಾಮಿ ಪ್ರವಾಸದಲ್ಲಿರುವ ಮಾಜಿ  ಸಿದ್ದರಾಮಯ್ಯ ಕಂಪ್ಲೀಟ್ ಮೌನಕ್ಕೆ ಶರಣಾಗಿದ್ದಾರೆ. ರಾಜ್ಯ ರಾಜಕೀಯದಲ್ಲಿ ಆಗುತ್ತಿರುವ ಕ್ಷೀಪ್ರ ಬೆಳವಣಿಗೆಯಿಂದ, ಬದಾಮಿ ಶಾಸಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನನಗೆ ಟೈಮ್ ಇಲ್ಲ ಬಿಟ್ಟುಬಿಡಿ ಎನ್ನುವ ಸಬೂಬು ನೀಡಿ ಮಾಧ್ಯಮಗಳಿಂದ ದೂರ ಉಳಿಯುತ್ತಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯರ ನಡೆ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಹೀಗೆ ಹೇಳುತ್ತಾ  ತಾಲೂಕಿನ ಗ್ರಾಮದಿಂದ ಗ್ರಾಮಕ್ಕೆ ಹೊರಟಿರುವ ಸಿದ್ದರಾಮಯ್ಯ, ಬದಾಮಿ ತಾಲ್ಲೂಕಿನ ಬಿ.ಎನ್.ಜಾಲಿಹಾಳ ಗ್ರಾಮಕ್ಕೆ ತೆರಳಿ, ಇತ್ತೀಚೆಗೆ ವಿದ್ಯುತ್ ತಗುಲಿ ಸಾವನ್ನಪ್ಪಿದ್ದ ಯುವಕ ರೈತ ಶರಣಪ್ಪ ಹಾದಿಮನಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ವೇಳೆ ಕುಟುಂಬಕ್ಕೆ  ವೈಯಕ್ತಿಕ 50 ಸಾವಿರ ಸಹಾಯಧನ ನೀಡಿದ್ರು. ಅಲ್ಲದೇ ಗ್ರಾಮಕ್ಕೆ ಆಗಮಿಸುವ ವೇಳೆ, ಚರಂಡಿ ಶುಚಿ ಇಲ್ಲದ್ದನ್ನ ಕಂಡು, ಪಟ್ಟದಕಲ್ಲು ಗ್ರಾಮ ಪಂಚಾಯ್ತಿಯ ಪಿಡಿಓ ಅರ್ಜುನ್ ರನ್ನ ತರಾಟೆಗೆ ತೆಗೆದುಕೊಂಡ್ರು.

ಯೂ ಆರ್ ಸಸ್ಪೆಂಡೆಡ್, ತಲೆ ಹರಟೆ ಮಾಡಿದ್ರೆ ಮನೆಗೆ ಹೋಗಬೇಕಾಗುತ್ತೆ ಎಂದು ಪಿಡಿಓಗೆ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ರು. ಆ ಬಳಿಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಸಮರ್ಪಕವಾಗಿ ಕೆಲಸ ಮಾಡುವಂತೆ ತಾಕೀತು ಮಾಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments