Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮಾಜಿ ಸಚಿವ ಡಿ.ಬಿ ಇನಾಮ್ದಾರ್ ವಿಧಿವಶ

ಕಾಂಗ್ರೆಸ್ ಮಾಜಿ ಸಚಿವ ಡಿ.ಬಿ ಇನಾಮ್ದಾರ್ ವಿಧಿವಶ
ಬೆಳಗಾವಿ , ಮಂಗಳವಾರ, 25 ಏಪ್ರಿಲ್ 2023 (09:29 IST)
ಬೆಳಗಾವಿ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಮ್ದಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ.
 
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ ಇನಾಮ್ದಾರ್ ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಸಾವನ್ನಪ್ಪಿದ್ದಾರೆ. 

ಇನಾಮ್ದಾರ್ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಮ್ದಾರ್ 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು, ಎಸ್.ಎಂ ಕೃಷ್ಣ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಹಿಂಸಾಚಾರ : ಭಾರತೀಯರ ರಕ್ಷಣೆಗೆ ‘ಆಪರೇಷನ್ ಕಾವೇರಿ’