ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ

Webdunia
ಶನಿವಾರ, 15 ಏಪ್ರಿಲ್ 2023 (08:24 IST)
ಚಿಕ್ಕಬಳ್ಳಾಪುರ : ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ (54)  ಹೃದಯಾಘಾತದಿಂದ ತಡರಾತ್ರಿ ನಿಧನರಾಗಿದ್ದಾರೆ.

ವೆಂಕಟಸ್ವಾಮಿಯವರಿಗೆ ಕಳೆದ ಒಂದು ತಿಂಗಳಲ್ಲೇ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಈ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ಸಹ ಹೃದಯಾಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಡರಾತ್ರಿ 2:20ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಅವರು ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಆಗಲಿದ್ದು, ಸ್ವಗ್ರಾಮ ಸಾದಹಳ್ಳಿಯ ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.  ಈ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಆದರೆ ಮಾ.21 ರಂದು ಪ್ರಚಾರ ಮುಗಿಸಿ ಮನೆಗೆ ಬಂದಾಗ ಮೊದಲ ಬಾರಿಗೆ ಹೃದಯಾಘಾತವಾಗಿತ್ತು.

ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿದ್ದರು. ಮತ್ತೆ ಎರಡು ಬಾರಿ ಹೃದಯಾಘಾತವಾಗಿತ್ತು. ಈಗ ಮೂರನೇ ಬಾರಿಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಾಜಿ ಶಾಸಕ ವೆಂಕಟಸ್ವಾಮಿಯವರ ಅಂತಿಮ ದರ್ಶನಕ್ಕೆ ಕಾಂಗ್ರೆಸ್ ನಾಯಕರು ಸೇರಿದಂತೆ ಜನ ಆಗಮಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments