Publish Date: Sun, 28 Apr 2019 (10:21 IST)
Updated Date: Sun, 28 Apr 2019 (10:24 IST)
ಚನ್ನರಾಯಪಟ್ಟಣ : ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ಡಾ.ಎನ್.ಬಿ.ನಂಜಪ್ಪ ಶನಿವಾರ ರಾತ್ರಿ ನಿಧನರಾಗಿದ್ದಾರೆ.
ಇವರಿಗೆ 89 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಲೆಯಿಂದ ಬಳಲುತ್ತಿದ್ದ ಅವರಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.
ವೈದ್ಯಕೀಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಡಾ.ಎನ್.ಬಿ.ನಂಜಪ್ಪ ಅವರು 1989 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.