Webdunia - Bharat's app for daily news and videos

Install App

ಬಿಬಿಎಂಪಿ ಆಡಳಿತಾಧಿಕಾರಿ ವಿರುದ್ಧ ಮಾಜಿ ಕಾರ್ಪೊರೇಟರ್‌ಗಳು ಗರಂ

Webdunia
ಶುಕ್ರವಾರ, 24 ಏಪ್ರಿಲ್ 2015 (18:25 IST)
ಬಿಬಿಎಂಪಿಯ ನೂತನ ಆಡಳಿತಾಧಿಕಾರಿ ಟಿ.ಎಂ.ವಿಜಯ ಭಾಸ್ಕರ್ ಅವರು ಬಿಬಿಎಂಪಿಯಲ್ಲಿ ತಾನೇ ಸ್ವಂತ ನಿಯಮಗಳನ್ನು ಅಳವಡಿಸಿಕೊಂಡು ನೂತನ ಬಜೆಟ್ ಮಂಡಿಸುವುದಾಗಿ ಹೇಳಿಕೆ ನೀಡಿದ್ದರ ವಿರುದ್ಧ ಪ್ರಸ್ತುತ ಪಾಲಿಕೆಯ ಮಾಜಿ ಬಿಜೆಪಿ ಸದಸ್ಯರು ಗರಂ ಆಗಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. 
 
ಮಾಜಿ ಮೇಯರ್ ಶಾಂತಕುಮಾರಿ ಅವರ ನೇತೃತ್ವದಲ್ಲಿ ಆಗಮಿಸಿದ್ದ ಬಿಜೆಪಿ ಸದಸ್ಯರು ನಗರದಲ್ಲಿರುವ ಬಿಜೆಪಿ ಪಕ್ಷದ ಮುಖ್ಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಅಲ್ಲದೆ ಬಿಜೆಪಿಯ ಅನೇಕ ಸದಸ್ಯರುಗಳು ಈ ವಿರುದ್ಧ ಧ್ವನಿ ಎತ್ತಿದ್ದು, ಆ ಎಲ್ಲರ ಸಹಿಗಳನ್ನು ಪತ್ರದಲ್ಲಿ ಅಡಕವಾಗಿಸಿ ವಿಜಯ್ ಬಾಸ್ಕರ್ ಅವರ ನಿರ್ಧಾರವನ್ನು ಖಂಡಿಸಿ ಬಿಜೆಪಿ ನಾಯಕರಿಗೆ ಮನವಿ ಸಲ್ಲಿಸಿದರು.  
 
ಬಳಿಕ ಮಾಧ್ಯಮಗಲೊಂದಿಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಮಂಡಿಸಲಾಗಿದ್ದ ಆಯವ್ಯಯವು ಸಮರ್ಪಕವಾಗಿದೆ. ಅದರ ಬದಲಾಗಿ ಮತ್ತೊಂದು ಆಯವ್ಯಯವನ್ನು ಮಂಡಿಸುವ ಅಗತ್ಯವಿಲ್ಲ. ಆದ್ದರಿಂದ  ಭಾಸ್ಕರ್ ತಮ್ಮ ನಿರ್ಧಾರವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಆಡಲಿತಾಧಿಕಾರಿಗಳು ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.  ಪ್ರತಿಭಟನೆಯಲ್ಲಿ ಬಿಜೆಪಿಯ 30ಕ್ಕೂ ಹೆಚ್ಚು ಮಾಜಿ ಕಾರ್ಪೊರೇಟರ್‌ಗಳು ಭಾಗವಹಿಸಿದ್ದರು. 
 
ಇನ್ನು ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಆಡಲಿತಾಧಿಕಾರಿ ವಿಜಯ್ ಭಾಸ್ಕರ್, ನಾನು ಕೇವಲ ಹೇಳಿಕೆ ನೀಡಿದ್ದೆ ಅಷ್ಟೇ. ಆದರೆ ಆ ಬಗ್ಗೆ ಯಾವುದೇ ರೀತಿಯ ಅಂತಿಮ ತೀರ್ಮಾನವನ್ನು ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments