ಬೆಳಗಾವಿ: ಗೋವಾದ ಮಾಜಿ ಶಾಸಕ ಲಾವೂ ಮಾಮಲೇದಾರ್ ಅವರನ್ನು ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ಬರ್ಬರವಾಗಿ ಹತ್ಯೆ ಮಾತನಾಡಿದೆ.
ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೇ ಲಾವೂ ಮಾಮಲೇದಾರ್ ಮೇಲೆ ಏಕಾಏಕಿ ದಾಳಿ ಮಾಡಿದ್ದಾನೆ. ಪರಿಣಾಮ ಮಾಜಿ ಶಾಸಕ ಲಾವೂ ಮಾಮಲೇದಾರ್ ಸ್ಥಳದಲ್ಲೇ ಕುಸಿದುಬಿದ್ದು ಕೊನೆಯುಸಿರೆಳೆದಿದ್ದಾರೆ.
ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೋ ಮಾಮಲೇದಾರ್ ಇಂದು ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ಬೆಳಗಾವಿಯ ಖಡೇಬಜಾರ್ ಬಳಿಕ ಆಟೋಗೆ ಮಾಜಿ ಶಾಸಕರ ಕಾರು ಟಚ್ ಆಗಿದೆ. ರಸ್ತೆಯಲ್ಲಿ ಎಷ್ಟೇ ಕೂಗಿದರೂ ಕೇರ್ ಮಾಡದೇ ಹೊರಟ ಮಾಜಿ ಶಾಸಕ ಲಾವೋ ಮಾಮಲೇದಾರ್ ಕಾರನ್ನು ಆಟೋ ಚಾಲಕ ಹಿಂಬಾಲಿಕೊಂಡು ಹೋಗಿದ್ದಾನೆ.
ಶ್ರೀನಿವಾಸ ಲಾಡ್ಜ್ ಬಳಿ ನಿಂತಿದ್ದಾಗ ಆಟೋ ಚಾಲಕ ಮತ್ತೇ ಜಗಳ ಆರಂಭಿಸಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಆಟೋ ಚಾಲಕ ಲಾವೋ ಮಾಮಲೇದಾರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಆಗ ಸ್ಥಳೀಯರು ಹಾಗೂ ಲಾಡ್ಜ್‌ನ ಸಿಬ್ಬಂದಿ ಬಂದು ಇಬ್ಬರ ಜಗಳವನ್ನು ಬಿಡಿಸಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಪೆಟ್ಟು ತಿಂದಿದ್ದ ಲಾವೋ ಮಾಮಲೇದಾರ್ ಲಾಡ್ಜ್‌ನ ಮೆಟ್ಟಿಲು ಹತ್ತುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈಗ ಲಾವೋ ಮಾಮಲೇದಾರ್ ಮೃತ ದೇಹವನ್ನು ಬೆಳಗಾವಿ ಬೀಮ್ಸ್‌ಗೆ ರವಾನೆ ಮಾಡಲಾಗಿದೆ.