Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಅನಿಲ್ ಲಾಡ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು

webdunia
ಮಂಗಳವಾರ, 30 ನವೆಂಬರ್ 2021 (19:45 IST)
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಮತ್ತು ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ (Congress leader Anil Lad) ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ (High grounds police station in Bengaluru) ರಾಜ್ಯ ಬಿಜೆಪಿ (BJP) ನಾಯಕರು ದೂರು ದಾಖಲಿಸಿದ್ದಾರೆ.
 
ಮಾಜಿ ರಾಜ್ಯಸಭಾ ಸದಸ್ಯ ಅನಿಲ್ ಲಾಡ್ ಅವರು, ಸಂವಿಧಾನ ರಚನೆ ಮಾಡಿದ್ದು ಇಂದಿರಾ ಗಾಂಧಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂದು ಸಾಮಾಜಿಕ ಜಾಲತಾಣದಲ್ಲಿ ನೀಡಿರುವ ಹೇಳಿಕೆ ಮತ್ತು ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಹೇಳಿಕೆ ನೀಡಿರುವ ವಿಚಾರ ಸಂಬಂಧ ಸಿದ್ಧರಾಮಯ್ಯ ಮತ್ತು ಅನಿಲ್ ಲಾಡ್ ವಿರುದ್ಧ ಬಿಜೆಪಿ ನಾಯಕರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
 
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್​ ನಾರಾಯಣ ಮತ್ತು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ