Select Your Language

Notifications

webdunia
webdunia
webdunia
webdunia

ಮಾಜಿ ಸಚಿವ, ಜೆಡಿಎಸ್ ಮುಖಂಡ ಕೆ.ಅಮರನಾಥ್ ಶೆಟ್ಟಿ ನಿಧನ

ಮಂಗಳೂರು
ಮಂಗಳೂರು , ಸೋಮವಾರ, 27 ಜನವರಿ 2020 (11:20 IST)
ಮಂಗಳೂರು : ಅನಾರೋಗ್ಯದ ಹಿನ್ನಲೆಯಲ್ಲಿ ಮಾಜಿ ಸಚಿವ, ಜೆಡಿಎಸ್ ಮುಖಂಡ  ಕೆ.ಅಮರನಾಥ್  ಶೆಟ್ಟಿ ಇಂದು ನಿಧನರಾಗಿದ್ದಾರೆ.

ಇವರಿಗೆ 80 ವರ್ಷ ವಯಸ್ಸಾಗಿದ್ದು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಕರಾವಳಿ ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದ ಇವರು ಮೂಡುಬಿದಿರೆ ಕ್ಷೇತ್ರದಲ್ಲಿ 3 ಬಾರಿ ಶಾಸಕರಾಗಿ , ಸಚಿವರಾಗಿ ಕೆಲಸ ಮಾಡಿದ್ದಾರೆ. ಇವರ ನಿಧನಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಂಬರ್ ಆದಿತ್ಯ ರಾವ್ ಲಾಕರ್ ನಲ್ಲಿ ಸಿಕ್ಕ ಪುಡಿ ಏನೆಂಬುದು ಪ್ರಾಥಮಿಕ ವರದಿಯಲ್ಲಿ ಬಯಲು