Select Your Language

Notifications

webdunia
webdunia
webdunia
webdunia

ಮಾಜಿ ಸಚಿವ ಕಳಕಪ್ಪ ಬಂಡಿ ಸಹೋದರನಿಂದ ಯುವಕನ ಮೇಲೆ ಹಲ್ಲೆ

ಮಾಜಿ ಸಚಿವ
ಗದಗ್ , ಬುಧವಾರ, 25 ಮೇ 2016 (15:19 IST)
ಕ್ಷುಲ್ಲಕ ಕಾರಣಕ್ಕಾಗಿ ಮಾಜಿ ಸಚಿವ ಕಳಕಪ್ಪ ಬಂಡಿ ಸಹೋದರ ಸಿದ್ದಪ್ಪ ಬಂಡಿ ಯುವಕನ ಮೇಲೆ ರಾಡ್‍ನಿಂದ ಹಲ್ಲೆ ಮಾಡಿದ ಘಟನೆ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ನಡೆದಿದೆ.
 
ಹಲ್ಲೆಗೊಳಗಾದ ಯುವಕನನ್ನು ಶಿವಪ್ಪಾ ಮಾಳೊತ್ತರ ಎಂದು ಗುರುತಿಸಲಾಗಿದೆ. ಗದಗ್ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿರುವ ಕಳಕಪ್ಪ ಬಂಡಿ ಮಾಲೀಕತ್ವದ ಪೆಟ್ರೋಲ್ ಬಂಕ್‌ಗೆ ಬಂದಿದ್ದ ಯುವಕ ಶಿವಪ್ಪ ಮಾಳೊತ್ತರ, 30 ರೂಪಾಯಿಗೆ ಪೆಟ್ರೋಲ್ ಹಾಕಿ ಎಂದು ಕೇಳಿಕೊಂಡಿದ್ದಾನೆ. ಆದರೆ, ಪೆಟ್ರೋಲ್ ಬಂಕ್ ಸಿಬ್ಬಂದಿ 30 ರೂಪಾಯಿಗೆ ಪೆಟ್ರೋಲ್ ನೀಡಲು ನಿರಾಕರಿಸಿದ್ದಾರೆ. ಈ ಕುರಿತು ಇಬ್ಬರ ಮಧ್ಯ ಮಾತಿನ ಚಕಮಕಿ ನಡೆದಿದ್ದು, ಬಂಕ್‌ನಲ್ಲಿದ್ದ ಕಳಕಪ್ಪ ಬಂಡಿ ಸಹೋದರ ಸಿದ್ದಪ್ಪ ಬಂಡಿ ಮತ್ತು ಬೆಂಬಲಿಗರು ಯುವಕನ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
 
ಘಟನೆಗೆ ಸಂಬಂಧಿಸಿದಂತೆ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಸಹಕಾರಕ್ಕೆ ಜೆಡಿಎಸ್ ಮನವಿ