Select Your Language

Notifications

webdunia
webdunia
webdunia
webdunia

ಮಾಜಿ ಸಚಿವ ಖಮರುಲ್ ಸಾವಿಗೆ ಮಲ್ಲಿಕಾರ್ಜುನ ಖರ್ಗೆ ಅವರೇ ಕಾರಣ- ಬಾಬುರಾವ್ ಚಿಂಚನಸೂರು

ಮಾಜಿ ಸಚಿವ ಖಮರುಲ್ ಸಾವಿಗೆ ಮಲ್ಲಿಕಾರ್ಜುನ ಖರ್ಗೆ ಅವರೇ ಕಾರಣ- ಬಾಬುರಾವ್ ಚಿಂಚನಸೂರು
ಕಲಬುರಗಿ , ಸೋಮವಾರ, 18 ಫೆಬ್ರವರಿ 2019 (10:08 IST)
ಕಲಬುರಗಿ : ಮಾಜಿ ಸಚಿವ ಖಮರುಲ್ ಇಸ್ಲಾಂ ಸಾವಿಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೇ ಕಾರಣ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಆರೋಪಿಸಿದ್ದಾರೆ.


ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಕಲಬುರಗಿ ಉತ್ತರ ಕ್ಷೇತ್ರದ ಖಮರುಲ್ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಸಚಿವ ಸಂಪುಟ ವಿಸ್ತರಣೆ ವೇಳೆ ನನ್ನನ್ನು ಹಾಗೂ ಖಮರುಲ್ ಇಸ್ಲಾಂ ಅವರನ್ನು ಕೈಬಿಡುವಂತೆ ಮಲ್ಲಿಕಾರ್ಜುನ ಖರ್ಗೆ ಹೈಕಮಾಂಡ್ ಮೂಲಕ ಒತ್ತಡ ಹೇರಿದ್ದರು. ಆದಕಾರಣ  ನಮ್ಮನ್ನು ಸಚಿವ ಸ್ಥಾನದಿಂದ ಕೆಳಗೆ ಇಳಿಸಿ ತಮ್ಮ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಮಂತ್ರಿ ಮಾಡಿದರು. ಇದರಿಂದ ಮನನೊಂದ ಖಮರುಲ್ ಅವರು ಕೆಲವೇ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದರು.


ಒಂದು ವೇಳೆ ಸಚಿವ ಸ್ಥಾನದಲ್ಲಿ ಖಮರುಲ್ ಅವರು ಇದ್ದಿದ್ದರೆ ಹೆಚ್ಚುಕಾಲ ಬಾಳುತ್ತಿದ್ದರು. ಹೀಗಾಗಿ ಖಮರುಲ್ ಅವರ ಸಾವಿಗೆ ಮಲ್ಲಿಕಾರ್ಜುನ ಖರ್ಗೆ ಅವರೇ ಕಾರಣ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಅಷ್ಟೇ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲುವುದು ಸತ್ಯ’ ಎಂದು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

Share this Story:

Follow Webdunia kannada

ಮುಂದಿನ ಸುದ್ದಿ

ಹಣ ಪಡೆದಿದ್ದೇನೆ ಎಂಬುದು ಸಾಬೀತಾದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ- ಉಮೇಶ ಜಾಧವ್