Publish Date: Mon, 29 Oct 2018 (15:46 IST)
Updated Date: Mon, 29 Oct 2018 (15:47 IST)
ಜೆಡಿಎಸ್ ಅಭ್ಯರ್ಥಿ ಕಣದಲ್ಲಿರುವ ಕಡೆ ಬಿ ಎಸ್ ಪಿ ಬೆಂಬಲ ಸೂಚಿಸುತ್ತಿದೆ. ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ನನ್ನ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ನೀಡಲು ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಇದು ನನ್ನ ವಯಕ್ತಿಕ ನಿರ್ಧಾರ ಎಂದು ಮಾಜಿ ಸಚಿವ ಹೇಳಿದ್ದಾರೆ.
ಮಂಡ್ಯದಲ್ಲಿ ಮಾಜಿ ಸಚಿವ ಎನ್. ಮಹೇಶ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜೀನಾಮೆ ಕೊಡುವ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡ್ತೀನಿ ಎಂದಿದ್ದೆ. ಹಾಗಾಗಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡ್ತೀದ್ದೇನೆ. ಎಲ್. ಆರ್. ಶಿವರಾಮೇಗೌಡರಿಗೆ ಮತ ನೀಡಿ ಅವ್ರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡ್ತೀನಿ ಎಂದ್ರು.
ಈ ಸಮ್ಮಿಶ್ರ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡ್ತಿದೆ. ನಾನು ಈ ಸರ್ಕಾರ ಕೆಲಸವನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಈ ಸರ್ಕಾರ 5ವರ್ಷ ಉಳಿಬೇಕು. ಕುಮಾರಸ್ವಾಮಿ ಅವರದ್ದು ಜನಪರ ಆಡಳಿತ ನೀಡುವ ಸರಕಾರವಾಗಿದೆ. ಅಭಿವೃದ್ಧಿಯ ಕನಸು ಹೊತ್ತು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ ಎಂದರು.
ಮಂಡ್ಯ ರಾಮನಗರದಲ್ಲಿ ಅತ್ಯಂತ ಹೆಚ್ಚು ಮತಗಳಿಂದ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಗೆಲ್ಲಲಿದ್ದಾರೆ ಎಂದರು.