Publish Date: Tue, 06 Nov 2018 (15:34 IST)
Updated Date: Tue, 06 Nov 2018 (15:36 IST)
ಮಾಜಿ ಸಚಿವ ಓಂಪ್ರಕಾಶ ಶಂಕಾರನಂದ ಕಣಗಲಿ ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಓಂಪ್ರಕಾಶ ಕಣಗಲಿ, ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.
ಮಾಜಿ ಕೇಂದ್ರ ಸಚಿವ ಬಿ.ಶಂಕಾರನಂದ ಅವರ ಪುತ್ರರಾಗಿರುವ ಓಂಪ್ರಕಾಶ ಅಂತ್ಯಕ್ರಿಯೆ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಿ ಗ್ರಾಮದಲ್ಲಿ ಮಧ್ಯಾಹ್ನ ಧಾರ್ಮಿಕ ವಿಧಿ ವಿಧಾನಗಳ ಮೂಲಕ ನೆರವೇರಿತು.
ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ, ರಾಜ್ಯ ಸರಕಾರದಲ್ಲಿ ಮಂತ್ರಿಯಾಗಿದ್ದರು. ಕ್ರಿಡಾ ಮತ್ತು ಯುವಜನ ಸೇವಾ ಸಚಿವರಾಗಿದ್ದ ಓಂಪ್ರಕಾಶ, ಸಚಿವರಾಗಿ ಜಿಲ್ಲೆಯಲ್ಲಿ ಹಲವಾರು ಕಾರ್ಯಗಳನ್ನು ಮಾಡಿ ಜನರ ಮೆಚ್ಚುಗೆ ಪಡೆದಿದ್ದರು.