ಮೈಸೂರು : ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನಪ್ಪಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸರ್ಕಾರಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.
ಚಾಮರಾಜನಗರದ ಸುದ್ದಿ ಮಾಧ್ಯಮಗಳಲ್ಲಿ ಬಂದಿದೆ. ಆದರೆ ಎಲ್ಲಾ ಜಿಲ್ಲೆಗಳ್ಲಲೂ ಇದೇ ರೀತಿಯ ಪರಿಸ್ಥಿತಿ ಇದೆ. ಸರ್ಕಾರ ಜನರಿಗೆ ಆಸೆ ತೋರಿಸುವ ಕೆಲಸ ಮಾಡ್ತಿದೆ. ಆದರೆ ಬಹುತೇಕ ರೋಗಿಗಳಿಗೆ ಚಿಕಿತ್ಸೆಯೇ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಅಲ್ಲದೇ ರಾಜ್ಯ ಸರ್ಕಾರಕ್ಕೆ ಕೊವಿಡ್ ಮೊದಲ ಅಲೆಯ ಅನುಭವ ಇತ್ತು. 2ನೇ ಅಲೆ ಬರುವ ಬಗ್ಗೆಯೂ ಮಾಹಿತಿ ಇತ್ತು. ಏಕೆ ಮುಂಜಾಗ್ರತಾ ಕ್ರಮಕೈಗೊಂಡಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ ಮಾಡಿದ್ದಾರೆ.