ಪ್ರತಿಭಟನೆ ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಕಿಡಿ

geetha
ಸೋಮವಾರ, 5 ಫೆಬ್ರವರಿ 2024 (21:12 IST)
ತುಮಕೂರು : ಸಂಸದ ಡಿ.ಕೆ ಸುರೇಶ್ ಅವರು ದಕ್ಷಿಣದ ಹಣವನ್ನ ಬಳಸಿಕೊಂಡು ಉತ್ತರದವರಿಗೆ ಕೊಡುತ್ತಾರೆ ಎನ್ನುವ ಮೂಲಕ  ದೇಶ ಒಡೆಯುವ ಮಾತನಾಡಿದ್ದಾರೆ. ಮಾಧ್ಯಮದಲ್ಲಿ, ಸಾರ್ವಜನಿಕವಾಗಿ ಇಡೀ ದೇಶದಲ್ಲಿ ಇದಕ್ಕೆ ಖಂಡನೆ ವ್ಯಕ್ತವಾಗಿದೆ. ರಾಜ್ಯಸಭೆ, ಲೋಕಸಭೆಯಲ್ಲಿ ಕೂಡ ಕಾಂಗ್ರೆಸ್ ಗೆ ಮುಜುಗರವಾಗಿದೆ ಎಂದು ನುಡಿದ ರೇಣುಕಾಚಾರ್ಯ, ಮತ್ತೊಂದು ಕಡೆ ಬಾಲಕೃಷ್ಣ ಅವರು ಮಂತ್ರಾಕ್ಷತೆ ಕೊಟ್ಟು ವೋಟ್ ಕೇಳ್ತಿದ್ದಾರೆ ಎಂದಿದ್ದಾರೆ. ಇದೆಲ್ಲ ಮುಜುಗರವನ್ನ ವಿಷಯಾಂತರಕ್ಕೆ ದೆಹಲಿಗೆ ಪ್ರತಿಭಟನೆ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದು 9 ತಿಂಗಳು ಕಳೆದರೂ ಸರ್ಕಾರ ಬದುಕಿದೆಯೇ ಸತ್ತಿದೆಯೇ ಎಂದು ಗೊತ್ತಾಗುತ್ತಿಲ್ಲ ಎಂದು ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.

ಇನ್ನೂ  ಫೆ. 7 ರಂದು ದೆಹಲಿಯಲ್ಲಿ ಕಾಂಗ್ರೆಸ್‌ ಮಾಡಲು ಹೊರಟಿರುವ ಪ್ರತಿಭಟನೆ ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಭಾನುವಾರ ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿಕೆಶಿ ಅವರಿಗೆ ಮಾಧ್ಯಮದ ಮುಖಾಂತರ ಬಹಿರಂಗ ಸವಾಲು ಹಾಕುತ್ತೇನೆ.  ಮನಮಹೋನ್ ಸಿಂಗ್ 10 ವರ್ಷ ಪ್ರಧಾನಿಯಾಗಿದ್ದಾಗ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. ಮೋದಿ ಪ್ರಧಾನಿ ಆದ ಮೇಲೆ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರೂರ್ ಕಾಲ್ತುಳಿತ: ಸಂತ್ರಸ್ತರ ಭೇಟಿಗೆ ವ್ಯವಸ್ಥೆ ಮಾಡಿದ ನಟ ವಿಜಯ್

ಯಮುನಾ ನೀರು ಶುದ್ಧವಾಗಿದೆಯೆಂದ ರೇಖಾ ಗುಪ್ತಾ ಕುಡಿದು ತೋರಿಸಲಿ: ಆ್ಯಪ್ ಸವಾಲು

7 ವರ್ಷದ ಬಾಲಕಿಯನ್ನು ಕೊಚ್ಚಿ ಕೊಂದ ಮಲತಂದೆ, ಕಾರಣ ಕೇಳಿದ್ರೆ ಶಾಕ್‌

ಉ.ಪ್ರದೇಶ: 5 ದೇವಸ್ಥಾನದ ಗೋಡೆಯಲ್ಲಿ ಐ ಲವ್ ಮುಹಮ್ಮದ್ ಬರಹ, ಉದ್ವಿಗ್ನ ವಾತಾವರಣ ಸೃಷ್ಟಿ

Kurnool Bus Accident: ಡಿಕ್ಕಿ ಹೊಡೆದ ಬೈಕ್ ಸವಾರರ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments