Publish Date: Wed, 04 May 2022 (10:13 IST)
Updated Date: Wed, 04 May 2022 (10:16 IST)
ಬೆಂಗಳೂರು : 50 ವರ್ಷಗಳ ಸುದೀರ್ಘ ರಾಜಕೀಯ ಜೀವನದಿಂದ ನಿವೃತ್ತಿಯಾಗುತ್ತಿದ್ದೇನೆ. ಲೌಕಿಕ ಜೀವನದಿಂದ ಆಧ್ಯಾತ್ಮಿಕ ಜೀವನದತ್ತ ಹೆಜ್ಜೆಯನ್ನಿಡುತ್ತಿದ್ದೇನೆ.
ಇದೇ ತಿಂಗಳ ಮೇ 6ರಂದು ರಾಜರಾಜೇಶ್ವರಿ ದೇವಸ್ಥಾನದ ಕೈಲಾಸ ಮಠದ ಶ್ರೀ ಶ್ರೀ ಶ್ರೀ ಜಯೇಂದ್ರ ತೀರ್ಥ ಪುರಿ ಮಹಾಸ್ವಾಮಿಜಿಯವರಿಂದ ಸನ್ಯಾಸ ದೀಕ್ಷೆಯನ್ನು ಸ್ವೀಕರಿಸಲಿದ್ದೇನೆ ಎಂದು ಮಾಜಿ ಸಚಿವ ಹಾಗೂ ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಏಪ್ರಿಲ್ 30ರಂದು ರಾಜೀನಾಮೆ ನೀಡಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಸಣ್ಣ ಕಪ್ಪುಚುಕ್ಕೆ ಇಲ್ಲದಂತೆ ಕೆಲಸ ಮಾಡಿರುವ ಆತ್ಮತೃಪ್ತಿಯಲ್ಲಿ ನಾನು ನಿವೃತ್ತಿಯನ್ನು ಹೊಂದುತ್ತಿದ್ದೇನೆ ಎಂದು ತಿಳಿಸಿದರು.