Publish Date: Sat, 02 Nov 2019 (10:05 IST)
Updated Date: Sat, 02 Nov 2019 (10:23 IST)
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ವೈಜನಾಥ್ ಪಾಟೀಲ್ ಅವರು ಇಂದು ನಿಧನರಾಗಿದ್ದಾರೆ.
ಇವರಿಗೆ 82 ವರ್ಷ ವಯಸ್ಸಾಗಿದ್ದು, ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಳೆ ಚಿಂಚೋಳಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ.
ಚಿಂಚೋಳಿ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಹಾಗೂ ವಿಧಾನಪರಿಷತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಾಗೇ ರಾಮಕೃಷ್ಣ ಹೆಗಡೆ ಹಾಗೂ ಹೆಚ್.ಡಿ.ದೇವೆಗೌಡರ ಸಂಪುಟದಲ್ಲಿ ಸಚಿವರಾಗಿದ್ದರು.