Publish Date: Thu, 05 Oct 2017 (16:56 IST)
Updated Date: Thu, 05 Oct 2017 (16:58 IST)
ಬಿಜೆಪಿ ಮುಖಂಡ ಮಾಜಿ ಸಂಸದ, ಮಾಜಿ ಅರಣ್ಯ ಸಚಿವ ವಿಜಯ್ ಶಂಕರ್ ಬಿಜೆಪಿಗೆ ಗುಡ್‌ಬೈ ಹೇಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ನಾಯಕರ ನಡೆಯಿಂದಾಗಿ ಬೇಸರಗೊಂಡಿರುವ ವಿಜಯ್ ಶಂಕರ್, ಬಿಜೆಪಿಗೆ ಗುಡ್‌ಬೈ ಹೇಳಿದಲ್ಲಿ ಮೈಸೂರು ಜಿಲ್ಲೆಯಲ್ಲಿ ಬಿಜೆಪಿಗೆ ಭಾರಿ ಹೊಡೆತ ಬೀಳಲಿದೆ ಎನ್ನಲಾಗುತ್ತಿದೆ.
ಬಿಜೆಪಿ ಮುಖಂಡ ವಿಜಯ್ ಶಂಕರ್, ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆಗಳು ದಟ್ಟವಾಗಿವೆ ಎನ್ನಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ, ವಿಜಯ್ ಶಂಕರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ವಿರುದ್ಧ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕಳೆದ 2014 ರ ಲೋಕಸಭೆ ಚುನಾವಣೆಯಲ್ಲಿ ವಿಜಯ್ ಶಂಕರ್ ಅವರನ್ನು ಕಡೆಗೆಣಿಸಿದ ಬಿಜೆಪಿ ಹೈಕಮಾಂಡ್, ಮೈಸೂರು ಬದಲಿಗೆ ಹಾಸನ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಿತ್ತು. ವಿಜಯ್ ಶಂಕರ್, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಸೋಲನುಭವಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.