Select Your Language

Notifications

webdunia
webdunia
webdunia
webdunia

ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇನ್ನಿಲ್ಲ

ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇನ್ನಿಲ್ಲ
ಚಿಕ್ಕಬಳ್ಳಾಪುರ , ಶುಕ್ರವಾರ, 15 ಏಪ್ರಿಲ್ 2022 (09:36 IST)
ಚಿಕ್ಕಬಳ್ಳಾಪುರ : ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇಂದು ನಿಧನರಾಗಿದ್ದಾರೆ.

ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿಯವರು ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇವರು ಸಿಪಿಐಎಂ ಪಕ್ಷದಿಂದ ಶಾಸಕರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಛಾಟಿತರಾದ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು. ಸದ್ಯ ಶ್ರೀರಾಮರೆಡ್ಡಿ ನಿಧನಕ್ಕೆ ಅಪಾರ ಪ್ರಮಾಣದ ಬೆಂಬಲಿಗರ ಸಂತಾಪ ಸೂಚಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ತಿಗೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬಾಮೈದ